ಕೋಲ್ಕತ್ತ: ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದ ವಿರೋಧ ಪಕ್ಷಗಳ ‘ಇಂಡಿಯಾ’ ಬಣದ ಸದಸ್ಯ ಪಕ್ಷಗಳೊಂದಿಗೆ ಸೀಟು ಹಂಚಿಕೆ ಆರಂಭಿಸಿರುವ ಕಾಂಗ್ರೆಸ್, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ನಿಂದ ಏಳು ಸೀಟುಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಲ್ಡಾ ಪ್ರಾಂತ್ಯದ ಬಹ್ರಾಂಪುರ, ಡಾರ್ಜಲಿಂಗ್, ರಾಯ್‌ಗಂಜ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ 2ರಲ್ಲಿ ಸ್ಪರ್ಧಿಸಲಿದೆ. ಜಂಗಿಪುರ, ಮುಷಿರಾಬಾದ್ ಹಾಗೂ ಪುರಲಿಯಾ ಸೇರಿದಂತೆ ಇತರ ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತು ಚರ್ಚೆಗಳು ನಡೆದಿವೆ ಎಂದು ವರದಿಯಾಗಿದೆ.
.3 ರಾಜ್ಯಗಳಲ್ಲಿ ಕಾಂಗ್ರೆಸ್–ಎಎಪಿ ಸೀಟು ಹಂಚಿಕೆ ಅಂತಿಮ; ಘೋಷಣೆಯಷ್ಟೇ ಬಾಕಿ!.Lok Sabha Elections | ಉ.ಪ್ರದೇಶದಲ್ಲಿ ಕಾಂಗ್ರೆಸ್ ಜತೆ ಮೈತ್ರಿ: ಅಖಿಲೇಶ್.
ಒಂದೊಮ್ಮೆ ಎಲ್ಲಾ ಕ್ಷೇತ್ರಗಳ ಕುರಿತು ಮಾತುಕತೆ ಯಶಸ್ವಿಯಾದಲ್ಲಿ ಕಾಂಗ್ರೆಸ್‌ಗೆ ಪಶ್ಚಿಮ ಬಂಗಾಳದಲ್ಲಿ 6ರಿಂದ 7 ಕ್ಷೇತ್ರಗಳು ಲಭಿಸುವ ಸಾಧ್ಯತೆ ಇದೆ ಎಂದೆನ್ನಲಾಗಿದೆ.

42 ಲೋಕಸಭಾ ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ ಈ ಮೊದಲು ಸ್ವತಂತ್ರ್ಯವಾಗಿ ಸ್ಪರ್ಧಿಸುವ ಕುರಿತು ತೃಣಮೂಲ ಕಾಂಗ್ರೆಸ್‌ನ ಅಧ್ಯಕ್ಷೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕಾಂಗ್ರೆಸ್, ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.