ನವದೆಹಲಿ: ಮಧ್ಯಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರಿದರೆ ಅಲ್ಲಿ ಜಾತಿಗಣತಿ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿದೆ.

ಜಾತಿಗಣತಿ ವಿಷಯವನ್ನೇ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತನ್ನ ಕಾರ್ಯಸೂಚಿಯಾಗಿ ಬಳಸಲು ಶನಿವಾರ ನವದೆಹಲಿಯಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಮಧ್ಯಪ್ರದೇಶದಲ್ಲಿನ ಪಕ್ಷದ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕಮಲ್ ನಾಥ್ ಪಾಲ್ಗೊಂಡಿದ್ದ ಸಭೆಯಲ್ಲಿ, 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಸಲಿರುವ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಾಯಿತು.

‘ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಚರ್ಚಿಸಲಾಗಿದೆ. ವಾರದೊಳಗೆ ಪಟ್ಟಿ ಬಿಡುಗಡೆ ಮಾಡಲಾಗುವುದು’ ಎಂದು ಸಭೆಯ ಬಳಿಕ ಕಮಲ್ ನಾಥ್ ಸುದ್ದಿಗಾರರಿಗೆ ತಿಳಿಸಿದರು.

ಸುರ್ಜೇವಾಲಾ ಮಾತನಾಡಿ, ‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದವರೇ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಸದ್ಯ ಕಮಲ್‌ನಾಥ್ ಅಧ್ಯಕ್ಷರಾಗಿದ್ದಾರೆ. ಅವರೇ ಸಿ.ಎಂ ಅಭ್ಯರ್ಥಿಯಾಗಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

230 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.