ಗುವಾಹಟಿ(ಅಸ್ಸಾಂ): ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವ ಮತ್ತು ಮೀಸಲಾತಿಯನ್ನು ರದ್ದುಗೊಳಿಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂಬ ಸುಳ್ಳುಗಳನ್ನು ಕಾಂಗ್ರೆಸ್ ಹರಡುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದ ಮತ್ತು ಬೆಂಬಲದಿಂದ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಮ್ಮ ಪಕ್ಷ ವಿರೋಧಿಸುತ್ತದೆ. ಏಕರೂಪ ನಾಗರಿಕ ಸಂಹಿತೆ ಜಾರಿ ಪರ ಬಿಜೆಪಿ ನಿಂತಿದೆ ಎಂದು ಹೇಳಿದರು.

ದಕ್ಷಿಣದ ರಾಜ್ಯಗಳ ಮತದಾರರಿಂದಲೂ ಪಕ್ಷಕ್ಕೆ ಉತ್ತಮ ಬೆಂಬಲ ಸಿಗುತ್ತಿದೆ. ಅಸ್ಸಾಂನ 14 ಲೋಕಸಭಾ ಸ್ಥಾನಗಳ ಪೈಕಿ 12ರಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.