ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

J & K Polls 2024: 2 ದಿನಗಳಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಮೂರು ಹಂತಗಳಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ
Published : 15 ಸೆಪ್ಟೆಂಬರ್ 2024, 15:36 IST
Last Updated : 15 ಸೆಪ್ಟೆಂಬರ್ 2024, 15:36 IST
ಫಾಲೋ ಮಾಡಿ
Comments

ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಹಿರಿಯ ನಾಯಕ ಭರತ್ ಸಿಂಗ್ ಸೋಲಂಕಿ ಭಾನುವಾರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಭಯೋತ್ಪಾದನೆಯನ್ನು ತೊಡೆದುಹಾಕಲು, ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸಲು ಬಿಜೆಪಿ ವಿಫಲವಾಗಿದೆ ಎಂದು ಹೇಳಿದರು.

‘ನಮ್ಮ ಪ್ರಣಾಳಿಕೆಯು ‘ಜುಮ್ಲಾ’ಗಳನ್ನು ಆಧರಿಸಿರುವುದಿಲ್ಲ ಮತ್ತು ಅದರ ಅನುಷ್ಠಾನವನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದು ಸೋಲಂಕಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT