ನವದೆಹಲಿ : 2018ರಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಪಡೆದ ನಂತರ ಕಾಂಗ್ರೆಸ್ 2019ರ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿತ್ತು. ಇದೀಗ ಕರ್ನಾಟಕ ಚುನಾವಣೆಯಲ್ಲಿ ಬಹುಮತ ಪಡೆದ ಮೇಲೆ 2024ರ ಲೋಕಸಭಾ ಚುನಾವಣೆ ಗೆಲ್ಲುತ್ತೇವೆ ಎಂಬ ‘ಭ್ರಮೆ‘ಯಲ್ಲಿದೆ ಎಂದು ಬಿಜೆಪಿ ಹಿರಿಯ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಟೀಕಿಸಿದ್ದಾರೆ.

ಕರ್ನಾಟಕ ಚುನಾವಣೆ ಫಲಿತಾಂಶ ಮತ್ತು ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಖ್ವಿ, ’ಕರ್ನಾಟಕ ಚುನಾವಣೆ ನಂತರ ವಿರೋಧ ಪಕ್ಷಗಳು ಭ್ರಮೆಯಲ್ಲಿವೆ. 2018ರಲ್ಲಿ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು. ಕರ್ನಾಟಕದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಆ ವೇಳೆ 2019ರ ಲೋಕಸಭಾ ಚುನಾವಣೆ ಗೆಲ್ಲಬಹುದೆಂಬ ಭ್ರಮೆಯಲ್ಲಿತ್ತು. ಈಗಲೂ ಅದೇ ಭ್ರಮೆಯಲ್ಲಿದೆ’ ಎಂದು ಹೇಳಿದರು.

’2018ರಲ್ಲಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಸ್ಥಾಪಿಸಿದಾಗ, ಕೆಲವರು ‘ಮೋದಿ ಮ್ಯಾಜಿಕ್‘ ಮುಗಿಯಿತು ಎಂದು ಹೇಳಿದ್ದರು. ಆದರೆ, ಮೋದಿ ಅವರ ಯಶಸ್ಸು ಅವರ ಲೆಕ್ಕಚಾರವನ್ನೇ ಬುಡಮೇಲು ಮಾಡಿತ್ತು‘ ಎಂದು ಹೇಳಿದರು.

‘2014ರಲ್ಲಿ ಭಾರಿ ಬಹುಮತ ಗಳಿಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2019ರ ಲೋಕಸಭಾ ಚುನಾವಣೆಯಲ್ಲಿಯೂ ಜನರು ಆರ್ಶೀವದಿಸಿದ್ದರು. ಬಿಜೆಪಿಗೆ 303 ಸ್ಥಾನಗಳನ್ನು ನೀಡುವ ಮೂಲಕ ಅತ್ಯುತ್ತಮ ಜನಾದೇಶವನ್ನು ನೀಡಿದ್ದರು‘ ಎಂದರು.

’ಲೋಕಸಭೆಯಲ್ಲಿ 116 ಸ್ಥಾನಗಳನ್ನು ಹೊಂದಿದ್ದ ಬಿಜೆಪಿಯನ್ನು 2014ರಲ್ಲಿ ಮೋದಿ ಅವರು 282 ಸ್ಥಾನಗಳಿಗೆ ತಂದು ಕುರಿಸಿದರು. 282 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ ಅನ್ನು 44 ಸ್ಥಾನಗಳಿಗೆ ತಂದು ನಿಲ್ಲಿಸಿದರು. ಇದಾದ ಮೇಲೆಯೂ ಹಲವು ರಾಜ್ಯಗಳಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಇದು ಮೋದಿ ಅವರ ಸಂಕಲ್ಪದ ಫಲವಾಗಿದೆ‘ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.