ಜೈಪುರ: ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ಅವರು ನೀಡಿರುವ ‘ಜನಾಂಗೀಯ ದ್ವೇಷ’ದ ಹೇಳಿಕೆಗಳನ್ನು ಖಂಡಿಸಿರುವ ಬಿಜೆಪಿ ಹಿರಿಯ ನಾಯಕ ಘನಶ್ಯಾಮ ತಿವಾರಿ, ಜನಾಂಗದ ಆಧಾರದ ಮೇಲೆ ದೇಶವನ್ನು ಒಡೆಯಲು ಕಾಂಗ್ರೆಸ್ ಬಯಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತಿವಾರಿ, ‘ಮೊದಲು ಜಾತಿಯ ಆಧಾರದಲ್ಲಿ, ನಂತರ ಧರ್ಮದ ಆಧಾರದ ಮೇಲೆ ಮತ್ತು ಈಗ ಜನಾಂಗದ ಆಧಾರದ ಮೇಲೆ ದೇಶವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ದೇಶವನ್ನು ಒಂದು ರಾಷ್ಟ್ರ ಎಂದು ಬಿಜೆಪಿ ಪರಿಗಣಿಸುತ್ತದೆ. ಆದರೆ, ದೇಶವನ್ನು ವಿವಿಧ ರಾಷ್ಟ್ರಗಳ ಗುಂಪು ಎಂದು ಕಾಂಗ್ರೆಸ್ ಪರಿಗಣಿಸುತ್ತದೆ ಹಾಗೂ ಪಕ್ಷವು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಯತಕಾಲಿಕೆಯ ಪಾಡ್‌ಕಾಸ್ಟ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಭಾರತದ ವೈವಿಧ್ಯವನ್ನು ವಿವರಿಸುವಾಗ, ‘ದೇಶದ ಪೂರ್ವ ಭಾಗದ ಜನರು ಚೀನಿಯರಂತೆ ಕಾಣುತ್ತಿದ್ದರೆ, ಪಶ್ಚಿಮದ ರಾಜ್ಯಗಳಲ್ಲಿರುವವರು ಅರಬ್ಬರ ಥರ ಕಾಣುತ್ತಾರೆ. ಅದೇ ರೀತಿ, ಉತ್ತರ ಭಾಗಗಳ ಜನರು ಬಹುಶಃ ಬಿಳಿಯರಂತೆ ಕಂಡರೆ, ದಕ್ಷಿಣದಲ್ಲಿರುವವರು ಆಫ್ರಿಕಾದವರಂತೆ ಕಾಣುತ್ತಾರೆ. ಈ ವೈವಿಧ್ಯದ ನಡುವೆಯೂ ನಾವು ಏಕತೆಯನ್ನು ಸಾಧಿಸಿದ್ದೇವೆ’ ಎಂದು ಪಿತ್ರೋಡಾ ಅವರು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.