ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಪಕ್ಷದ ಹೈಕಮಾಂಡ್ ಕಸರತ್ತು ನಡೆಸಿದೆ.

ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡುವ ಮುಖಂಡರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.

ರಾಜಸ್ಥಾನ ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲಿ ಒಂದೆರಡು ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಗೆಹಲೋತ್ ಸ್ಪರ್ಧಿಸುತ್ತಾರೆ ಎಂದು ವರದಿಯಾದ ಬೆನ್ನಲ್ಲೇ ರಾಜಸ್ಥಾನದ ನೂತನ ಸಿಎಂ ಸ್ಥಾನಕ್ಕೆ ಸಚಿನ್ ಪೈಲಟ್ ಎಂದು ಘೋಷಿಸಲು ಹೈಕಮಾಂಡ್ ಒಲವು ತೋರಿತ್ತು.

ಈ ನಿರ್ಧಾರವನ್ನು ಗೆಹಲೋತ್ ಬೆಂಬಲಿಗರು ವಿರೋಧಿಸಿದ್ದರು. ಇದು ಪಕ್ಷಕ್ಕೆ ಮುಜುಗರ ಉಂಟು ಮಾಡಿತ್ತು.

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ನೈತಿಕ ಹೊಣೆ ಹೊತ್ತುಕೊಂಡಿರುವ ಗೆಹಲೋತ್, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದರು.

ಅಲ್ಲದೆ, ಸೋನಿಯಾ ಗಾಂಧಿ ಅವರ ಜೊತೆ ಚರ್ಚೆ ನಡೆಸಿದ್ದ ಗೆಹಲೋತ್, ಕ್ಷಮೆಯಾಚಿಸಿದ್ದರು. ತಾವು ಪಕ್ಷದ ಶಿಸ್ತಿನ ಸಿಪಾಯಿ ಎಂದು ಹೇಳಿಕೊಂಡಿರುವ ಅವರು ಸಿಎಂ ಆಗಿ ಮುಂದುವರಿಯಬೇಕೇ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.