ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂವಿಧಾನದ ಅತಿ ದೊಡ್ಡ ವಿರೋಧಿಗಳೇ ಕಾಂಗ್ರೆಸಿಗರು: ಲಹರ್‌ ಸಿಂಗ್

Published 3 ಜುಲೈ 2024, 16:16 IST
Last Updated 3 ಜುಲೈ 2024, 16:16 IST
ಅಕ್ಷರ ಗಾತ್ರ

ನವದೆಹಲಿ: ಸೋನಿಯಾ ಗಾಂಧಿ ಅವರಿಂದ ಈ ಹುದ್ದೆಗೆ ಏರಿದ್ದೇನೆ ಎಂಬ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್‌ ಸಿಂಗ್‌ ಸಿರೋಯ, ‘ಇದನ್ನು ಕೇಳಿ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ’ ಎಂದು ಹೇಳಿದರು. 

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ‘ಖರ್ಗೆ ಅವರನ್ನು ಕರ್ನಾಟಕದ ಜನರು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಮಹಿಳೆಯೊಬ್ಬರು ವಿರೋಧ ಪಕ್ಷದ ಸ್ಥಾನಕ್ಕೆ ಯಾರನ್ನೂ ನೇಮಿಸಲು ಸಾಧ್ಯವಿಲ್ಲ. ಹೀಗೆ ಹೇಳುವುದು 140 ಕೋಟಿ ಜನರಿಗೆ ಮಾಡಿರುವ ಅಪಮಾನ’ ಎಂದು ಹೇಳಿದರು.

‘ತಾವೇ ಸಂವಿಧಾನದ ದೊಡ್ಡ ರಕ್ಷಕರು ಹಾಗೂ ಉಳಿದವರೆಲ್ಲ ಉಲ್ಲಂಘನೆ ಮಾಡುವವರು ಎಂದು ಕಾಂಗ್ರೆಸ್‌ನವರು ಹೇಳಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್‌ ನಾಯಕರೇ ಸಂವಿಧಾನವನ್ನು ಅತಿ ಹೆಚ್ಚು ಬಾರಿ ಉಲ್ಲಂಘಿಸಿದ್ದಾರೆ. 1975ರಲ್ಲಿ ಕಾಂಗ್ರೆಸ್‌ ಸಂವಿಧಾನವನ್ನೇ ಅಮಾನತಿನಲ್ಲಿಟ್ಟಿತ್ತು. ಜನರು ಈ ಘಟನೆಗಳನ್ನು ಮರೆಯಲು ಕಾಂಗ್ರೆಸ್ಸಿಗರು ಈಗ ಸಂವಿಧಾನದ ಉಲ್ಲಂಘನೆಯ ಕುರಿತು ಕಟ್ಟುಕಥೆಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT