ಸೂರತ್ : ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ಭಾನುವಾರ ತಿರಸ್ಕೃತಗೊಂಡಿದೆ.

ನಾಮಪತ್ರದಲ್ಲಿನ ಸಹಿಗಳು ತಮ್ಮವಲ್ಲ ಎಂದು ಮೂವರು ಸೂಚಕರು ಚುನಾವಣಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸಿದ ನಂತರ ನಾಮಪತ್ರ ತಿರಸ್ಕರಿಸಲಾಗಿದೆ. ಕಾಂಗ್ರೆಸ್‌ನ ಇನ್ನೊಬ್ಬ ಅಭ್ಯರ್ಥಿ ಸುರೇಶ್ ಪಡ್ಸಲ ಅವರ ನಾಮಪತ್ರ ಕೂಡ ಅಸಿಂಧುವಾಗಿದೆ.

ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸಗಳಿದ್ದವು ಮತ್ತು ಅವು ನಿಜವಲ್ಲ ಎಂದು ತಿಳಿದುಬಂದಿದ್ದರಿಂದ ಕುಂಭಾನಿ ಮತ್ತು ಪಡ್ಸಲ ಅವರ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಸೌರಭ್ ಪರ್ಧಿ ತಿಳಿಸಿದ್ದಾರೆ. ಇದರಿಂದಾಗಿ ಸೂರತ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಯೇ ಕಣದಲ್ಲಿ ಇಲ್ಲದಂತಾಗಿದೆ.

ಕಾಂಗ್ರೆಸ್ ಪಕ್ಷದ ವಕೀಲ ಬಾಬು ಮಾಂಗುಕಿಯಾ ಅವರು ಸುದ್ದಿಯನ್ನು ಖಚಿತಪಡಿಸಿದ್ದು, ಈ ಸಂಬಂಧ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಹೇಳಿದರು.

ಜಿಎಸ್‌ಪಿ ಅಭ್ಯರ್ಥಿ ನಾಮಪತ್ರ ಅಸಿಂಧು (ಕೊಕ್ರಾಝರ್ ವರದಿ):

ಅಸ್ಸಾಂನ ಮೀಸಲು ಕ್ಷೇತ್ರವಾದ ಕೊಕ್ರಾಝರ್ ಸಂಸದ, ಮೂರನೇ ಬಾರಿ ಆಯ್ಕೆ ಬಯಸಿದ್ದ ನಬಕುಮಾರ್ ಸರನಿಯಾ ಅವರ ನಾಮಪತ್ರ ಭಾನುವಾರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿ ಪ್ರದೀಪ್ ಕುಮಾರ್ ದ್ವಿವೇದಿ ತಿಳಿಸಿದ್ದಾರೆ.

ಗಣ ಸುರಕ್ಷಾ ಪಕ್ಷದ (ಜಿಎಸ್‌ಪಿ) ಮುಖ್ಯಸ್ಥರಾಗಿರುವ ಸರನಿಯಾ, 2014ರಿಂದಲೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅವರ ಜಾತಿ ಪ್ರಮಾಣ ಪತ್ರದ ಸಮಸ್ಯೆಯಿಂದಾಗಿ ನಾಮಪತ್ರ ಅಸಿಂಧುಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.