ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಎಲ್ಲಾ ರಾಜಕೀಯ ಪಕ್ಷಗಳ ಒಮ್ಮತದ ಒಪ್ಪಿಗೆ ಬೇಕಾಗುತ್ತದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ರಾಜ್ಯಸಭೆಯಲ್ಲಿ ಗುರುವಾರ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಲಿಂಗಾಧಾರಿತ ನ್ಯಾಯವು ಕೇಂದ್ರ ಸರ್ಕಾರದ ಅತ್ಯಂತ ಪ್ರಮುಖ ಬದ್ಧತೆ ಎಂದು ಹೇಳಿರುವ ಮೇಘ್ವಾಲ್ ಅವರು, ಈ ಮಸೂದೆಗೆ ಸಾಂವಿಧಾನಿಕ ತಿದ್ದುಪಡಿ ತಂದು ಸಂಸತ್ತಿನಲ್ಲಿ ಮಂಡಿಸುವ ಮೊದಲು, ಇದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಎಲ್ಲಾ ರಾಜಕೀಯ ಪಕ್ಷಗಳ ಅಭಿಪ್ರಾಯ ಸಂಗ್ರಹಿಸಿ ‘ಎಚ್ಚರಿಕೆಯಿಂದ ಪರಿಗಣಿಸಬೇಕಾಗುತ್ತದೆ’ ಎಂದು ಅವರು ಹೇಳಿದರು.

ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ 15 ವರ್ಷಗಳವರೆಗೆ ಶೇ 33ರಷ್ಟು ಮೀಸಲಾತಿ ನೀಡುವುದು ಈ ಮಸೂದೆಯ ಉದ್ದೇಶವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.