ನವದೆಹಲಿ: ‘ಮರಣದಂಡನೆಗೆ ಗುರಿಯಾಗಿರುವ ಅಪರಾಧಿಯನ್ನು ನೇಣಿಗೇರಿಸುವ ಬದಲು ಇತರೆ ಕಡಿಮೆ ನೋವಿನ ಮಾದರಿಯನ್ನು ಅನುಸರಿಸುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗುವುದು’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಮಂಗಳವಾರ ತಿಳಿಸಿತು.

ಈ ಸಂಬಂಧ ವಕೀಲ ರಿಷಿ ಮಲ್ಹೊತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಾಮೂರ್ತಿ ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು.

‘ಸಮಿತಿಗೆ ತಜ್ಞರ ಹೆಸರನ್ನು ಶಿಫಾರಸು ಮಾಡುವ ಪ್ರಕ್ರಿಯೆಯು ಕೊನೇ ಹಂತದಲ್ಲಿದೆ’ ಎಂದು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ‘ಅಟಾರ್ನಿ ಜನರಲ್ ಅವರು ಹೇಳಿದ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿದ್ದೇವೆ. ಬೇಸಿಗೆ ರಜೆಯ ಬಳಿಕ ವಿಚಾರಣೆಗೆ ದಿನಾಂಕ ನಿಗದಿ ಮಾಡುತ್ತೇವೆ’ ಎಂದಿತು.

ತಜ್ಞರ ಸಮಿತಿಯೊಂದನ್ನು ರಚಿಸಲು ಸುಪ್ರೀಂ ಕೋರ್ಟ್ ಮಾರ್ಚ್ 21ರಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.