ನವದೆಹಲಿ: ಶಾಲಾ ಮಕ್ಕಳಿಗೆ ಆನ್ಲೈನ್ ತರಗತಿ ನಡೆಸುವುದಕ್ಕೆ ಮಾರ್ಗಸೂಚಿಗಳನ್ನು ರೂಪಿಸಲುಕಾರ್ಯಪಡೆಯೊಂದನ್ನು ರಚಿಸಬೇಕು ಎಂದು ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಅಹ್ಮದ್ ಪಟೇಲ್ ಶನಿವಾರ ಆಗ್ರಹಿಸಿದ್ದಾರೆ.

ಶೂನ್ಯವೇಳೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಪಟೇಲ್, ‘ಕಂಪ್ಯೂಟರ್ ಹಾಗೂ ಸ್ಮಾರ್ಟ್ಫೋನ್ ಸೌಲಭ್ಯವಿಲ್ಲದ ಸಮಾಜದಲ್ಲಿನ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಆನ್ಲೈನ್ ತರಗತಿಗಳು ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಹೇಗೆ ಪರಿಣಾಮ ಬೀರುತ್ತಿದೆ, ಯಾವ ರೀತಿಯಲ್ಲಿ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತಿದೆ ಎನ್ನುವ ಕುರಿತು ಅಧ್ಯಯನ ನಡೆಸಲು ಕಾರ್ಯಪಡೆ ರಚಿಸಬೇಕು. ರಾಜ್ಯಗಳ ಜೊತೆ ಚರ್ಚಿಸಿ ಆನ್ಲೈನ್ ತರಗತಿಗಳನ್ನು ನಡೆಸುವುದಕ್ಕೆ ರಾಷ್ಟ್ರೀಯ ಮಟ್ಟದ ನಿಯಮಾವಳಿಗಳನ್ನು ಸರ್ಕಾರ ರಚಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.