ಪುಣೆ: ಭಕ್ತಿ ಹಾಗೂ ಶಕ್ತಿಯ ಕಾರಣದಿಂದಾಗಿ 500 ವರ್ಷಗಳ ಗುಲಾಮಗಿರಿಯ ಇತಿಹಾಸದಿಂದ ಮುಕ್ತಿ ಪಡೆಯುವ ಮೂಲಕ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ ಮಾಡಲು ಸಾಧ್ಯವಾಯಿತು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು( ಭಾನುವಾರ) ಹೇಳಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಆಯೋಜಿಸಿದ್ದ ‘ಗೀತಾ ಭಕ್ತಿ ಅಮೃತ ಮಹೋತ್ಸವ’ದಲ್ಲಿ ಅವರು ಮಾತನಾಡಿದರು.

ಮೊಘಲ್ ಚಕ್ರವರ್ತಿ ಔರಂಗಜೇಬನ ಅಧಿಕಾರ ವಿರುದ್ಧ ಸಮರ ಸಾರಿದ ಮರಾಠ ರಾಜ ಛತ್ರಪತಿ ಶಿವಾಜಿ ಭಕ್ತಿ ಹಾಗೂ ಶಕ್ತಿಯ ರೂಪ. ಮಹಾರಾಷ್ಟ್ರ ಶೌರ್ಯದ ಸಂಕೇತವಾಗಿದೆ ಎಂದು ಯೋಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮ್ಯೂಸಿಯಂ ಅನ್ನು ನಿರ್ಮಿಸಲಾಗುತ್ತಿದ್ದು ಅದಕ್ಕೆ ಛತ್ರಪತಿ ಶಿವಾಜಿ ಹೆಸರಿಡಲಾಗಿದೆ. ನಾವು ಛತ್ರಪತಿ ಶಿವಾಜಿ ಮಹಾರಾಜ ಅವರ ಆದರ್ಶಗಳನ್ನು ಪಾಲಿಸುತ್ತೇವೆಯೇ ಹೊರತು ಮೊಘಲರನ್ನಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.