ಇಂದೋರ್: ಇಂಗ್ಲೆಂಡ್‌ನಲ್ಲಿದ್ದ 93 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನ ಭಾನುವಾರ ಬೆಳಿಗ್ಗೆ ಮಧ್ಯಪ್ರದೇಶದ ಇಂದೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಕೇಂದ್ರದ 'ವಂದೇ ಭಾರತ್' ಕಾರ್ಯಾಚರಣೆಯಡಿ ಲಂಡನ್‌ನಿಂದ ಹೊರಟ ವಿಮಾನ ಮುಂಬೈ ಮೂಲಕ ಇಂದು ಬೆಳಿಗ್ಗೆ 8.04 ಕ್ಕೆ ಇಂದೋರ್‌ಗೆ ಬಂದು ತಲುಪಿದೆ ಎಂದು ಇಂದೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕಿ ಆರ್ಯಮಾ ಸನ್ಯಾಲ್ ತಿಳಿಸಿದ್ದಾರೆ.

ಇಂಗ್ಲೆಂಡ್‌ನಿಂದ ಆಗಮಿಸಿರುವ ವಿಶೇಷ ವಿಮಾನವು 93 ಭಾರತೀಯರನ್ನು ಕರೆತಂದಿದೆ ಎಂದು ಅವರು ಹೇಳಿದ್ದಾರೆ.

ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಅವರ ವಸ್ತುಗಳನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಸನ್ಯಾಲ್ ತಿಳಿಸಿದ್ದಾರೆ.

ಇಂಗ್ಲೆಂಡ್‌ನಿಂದ ಭಾರತಕ್ಕೆ ಮರಳಿರುವವರನ್ನು ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.