ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು, ಆಮ್ ಆದ್ಮಿ ಪಕ್ಷವು (ಎಎಪಿ) ಸ್ಪಷ್ಟ ಬಹುಮತ ಪಡೆದಿದೆ.

ಇದರೊಂದಿಗೆ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯವಾಗಲಿದ್ದು, ಎಎಪಿ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿಯಲಿದೆ.

ಚುನಾವಣೆಯಲ್ಲಿ ಎಎಪಿ 134 ಸ್ಥಾನಗಳನ್ನು ಗೆದ್ದಿದೆ, ಬಿಜೆಪಿ 104 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಕಾಂಗ್ರೆಸ್ 9 ಸ್ಥಾನಗಳನ್ನು ಗಳಿಸಿದರೆ, ಸ್ವತಂತ್ರ ಅಭ್ಯರ್ಥಿಗಳು 3ರಲ್ಲಿ ಗೆಲುವು ಸಾಧಿಸಿದ್ದಾರೆ.

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಡಿಸೆಂಬರ್ 4, ಭಾನುವಾರದಂದು ಮತದಾನ ನಡೆದಿತ್ತು.

‘ಪಾಲಿಕೆ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿ, ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ ದೆಹಲಿ ಜನತೆಗೆ ದೆಹಲಿ ಧನ್ಯವಾದ ಸಲ್ಲಿಸಿಸುತ್ತೇನೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಲಿಕೆಯ ಪ್ರತಿಪಕ್ಷಗಳಾದ ಜಿಜೆಪಿ– ಕಾಂಗ್ರೆಸ್ನವರ ಸಹಕಾರದೊಂದಿಗೆ ದೆಹಲಿ ಅಭಿವೃದ್ಧಿಗಾಗಿ ಉತ್ತಮ ಆಡಳಿತ ನಡೆಸಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.