ಲಖನೌ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು (ಗುರುವಾರ ಮಾ. 10) ಪ್ರಕಟವಾಗಲಿದೆ. 403 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಬೆಳಿಗ್ಗೆ 8ಕ್ಕೆ ಆರಂಭವಾಗಿದೆ.

ರಾಜ್ಯದಾದ್ಯಂತ ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ.

ಯುಪಿ ವಿಧಾನಸಭೆಗೆ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆದಿತ್ತು.

202 ಮ್ಯಾಜಿಕ್ ಸಂಖ್ಯೆಯಾಗಿದ್ದು, ಬಹುತೇಕ ಚುನಾವಣಾ ಸಮೀಕ್ಷೆಗಳು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಭವಿಷ್ಯ ನುಡಿದಿವೆ. ಸಮಾಜವಾದಿ ಪಕ್ಷ ಪ್ರಬಲ ಪೈಪೋಟಿಯೊಡ್ಡುವ ಸಾಧ್ಯತೆ ಇದೆ.

ಉತ್ತರಾಖಂಡದ , ಪಂಜಾಬ್, ಗೋವಾ ಮತ್ತು ಮಣಿಪುರ ವಿಧಾನಸಭೆ ಚುನಾವಣೆ ಫಲಿತಾಂಶವೂ ಇದೇ ದಿನ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.