ಮುಂಬೈ: ಮಹಾರಾಷ್ಟ್ರದ ಥಾಣೆಯ ಘೋಡ್ಬಂದರ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ದಂಪತಿ ಮೃತಪಟ್ಟಿದ್ದು, ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು (ಶನಿವಾರ) ಮುಂಜಾನೆ 3.20ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಅಭಿಮನ್ಯು ಮಾದ್ವಿ (60) ಮತ್ತು ಅವರ ಪತ್ನಿ ರಮಾಬಾಯಿ (55) ದಂಪತಿ ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಅದೇ ಕುಟುಂಬದ ಮೂವರನ್ನು ರಕ್ಷಿಸಲಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಆರ್ಡಿಎಂಸಿ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಎರಡು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದಾಗ ದಂಪತಿ ಮತ್ತು ಕುಟುಂಬದ ಇತರ ಸದಸ್ಯರು ಮೊದಲ ಮಹಡಿಯಲ್ಲಿ ಮಲಗಿದ್ದರು ಎಂದು ತಿಳಿದು ಬಂದಿದೆ. ಕೋಣೆಯಲ್ಲಿ ದಂಪತಿಯ ಮೃತದೇಹಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿವೆ. ಉಳಿದಂತೆ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಆರ್ಡಿಎಂಸಿ ಅಧಿಕಾರಿ ಯಾಸಿನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.