ಮುಂಬೈ (ಪಿಟಿಐ): ಮೇಧಾ ಸೋಮಯ್ಯ ಎಂಬುವವರು ತಮ್ಮ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಕೋರಿದ ಕಾರಣಕ್ಕಾಗಿ ರಾಜ್ಯಸಭಾ ಸಂಸದ ಸಂಜಯ್ ರಾವುತ್ ಅವರಿಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ₹ 1,000 ದಂಡ ವಿಧಿಸಿದೆ.

ರಾವುತ್ ಪರ ವಕೀಲರು ಮೇಧಾ ಅವರನ್ನು ಪಾಟಿಸವಾಲಿಗೆ ಒಳಪಡಿಸಲು ದಿನಾಂಕ ನಿಗದಿಪಡಿಸಿದ್ದರು. ಆದರೆ, ‘ರಾವುತ್ ಪಾಟಿಸವಾಲಿಗೆ ಸಿದ್ಧರಿಲ್ಲದ ಕಾರಣ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು’ ಎಂದು ವಕೀಲರು ಮನವಿ ಮಾಡಿಕೊಂಡರು.

ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (ಸೆವ್ರಿ) ನ್ಯಾಯಾಲಯದ ನ್ಯಾಯಾಧೀಶ ಪಿ.ಐ. ಮೊಕಾಶಿ ಅವರು ವಿಚಾರಣೆಯನ್ನು ಮುಂದೂಡಲು ಒಪ್ಪಿಕೊಂಡರು. ಆದರೆ, ರಾವುತ್ ಅವರಿಗೆ ₹ 1,000 ದಂಡ ವಿಧಿಸಿದರು.

ಪ್ರಕರಣದ ಮುಂದಿನ ವಿಚಾರಣೆಯು ಏಪ್ರಿಲ್ 10ರಂದು ನಡೆಯಲಿದೆ.

ಮುಂಬೈ ಸಮೀಪದ ಮೀರಾ ಭಾಯಂದರ್ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ತಾನು ಮತ್ತು ತನ್ನ ಪತಿ ₹100 ಕೋಟಿ ಹಗರಣದಲ್ಲಿ ಭಾಗಿಯಾಗಿದ್ದೇವೆ ಎಂದು ರಾವುತ್ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಮೇಧಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.