ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ನೀಡಿದ ದೂರಿನ ಮೇರೆಗೆ ಇಲ್ಲಿನ ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಮಾರ್ಚ್ 16 ರಂದು ನ್ಯಾಯಾಲಯ ಮುಂದೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಬಾರಿ ವಿಚಾರಣೆಗೆ ಹಾಜರಾಗದೆ ಇರುವ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಬುಧವಾರ(ಮಾ.6) ನ್ಯಾಯಾಲಯದ ಮೆಟ್ಟಿಲೇರಿತ್ತು.

‘ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಅವರು ಸಮನ್ಸ್ ಸಂಖ್ಯೆ 4ರಿಂದ 8ಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ನ್ಯಾಯಾಲಯದ ಎದುರು ದೂರಿತ್ತು.

ಮೊದಲ ಮೂರು ಸಮನ್ಸ್‌ಗಳಿಗೆ ಪ್ರತಿಕ್ರಿಯೆ ನೀಡದ ಅರವಿಂದ ಕೇಜ್ರಿವಾಲ್ ವಿರುದ್ಧ ಈ ಹಿಂದೆಯೂ ಇ.ಡಿ ನ್ಯಾಯಾಲಯದ ಮೊರೆ ಹೋಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.