ನವದೆಹಲಿ: ಕೋವಿಡ್–19 ಸಾಂಕ್ರಾಮಿಕ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ.

ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 1,03,558 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 478 ಸೋಂಕಿತರು ಅಸುನೀಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಓದಿ:ಕೋವಿಡ್ ಸ್ಥಿತಿ ಪರಾಮರ್ಶೆ ನಡೆಸಿದ ಪ್ರಧಾನಿ: ಕಠಿಣ ನಿಯಂತ್ರಣ ಕ್ರಮಕ್ಕೆ ಸೂಚನೆ

2020ರ ಸೆಪ್ಟೆಂಬರ್ 17ರಂದು ಒಂದೇ ದಿನ 98,795 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಆ ಬಳಿಕ ಇದು ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ. ಒಂದೇ ದಿನ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿರುವುದೂ ಇದೇ ಮೊದಲಾಗಿದೆ. ಈ ವಿಚಾರದಲ್ಲಿ ಭಾರತವೀಗ ಅಮೆರಿಕದ ನಂತರದ ಸ್ಥಾನ ಪಡೆದುಕೊಂಡಿದೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ ಈಗ 1.25 ಕೋಟಿ ದಾಟಿದ್ದು, ಈವರೆಗೆ 1,65,101 ಸಾವು ಸಂಭವಿಸಿದೆ. 1.16 ಕೋಟಿಗೂ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ.

ದೇಶದಲ್ಲೀಗ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830ಕ್ಕೆ ಏರಿಕೆಯಾಗಿದೆ. ಇದು ಒಟ್ಟು ಪ್ರಕರಣಗಳ ಶೇ 5.54ರಷ್ಟಾಗಿದೆ. ಗುಣಮುಖರಾಗುತ್ತಿರುವವರ ಪ್ರಮಾಣವೂ ಶೇ 93.14ಕ್ಕೆ ಕುಸಿದಿದೆ.

ಓದಿ:COVID-19: ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ, ವಾರಾಂತ್ಯದಲ್ಲಿ ಲಾಕ್‌ಡೌನ್ ಘೋಷಣೆ

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಸೋಂಕು ಹರಡುವಿಕೆ ತಡೆಯುವ ಸಲುವಾಗಿ ಅಲ್ಲಿ ವಾರಾಂತ್ಯ ಲಾಕ್‌ಡೌನ್, ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಕೋವಿಡ್ ಸ್ಥಿತಿ ಪರಾಮರ್ಶೆ ನಡೆಸಿದ್ದು, ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ಮರಣ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ರಾಜ್ಯಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.