ಹೈದರಾಬಾದ್: ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಲ್ಲಾ ಶಿಕ್ಷಣ ಸಂಸ್ಥೆಗಳ ರಜಾ ಅವಧಿಯನ್ನು ಜನವರಿ 30 ರವರೆಗೆ ವಿಸ್ತರಿಸಲಾಗಿದೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯು ಸೋಮವಾರ (ಜ.17) ನಡೆಯಲಿದೆ. ಪ್ರಮುಖವಾಗಿ ಕೋವಿಡ್ ಮತ್ತು ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ತಮಿಳುನಾಡು: ಜ.31ರವರೆಗೆ ಶಾಲೆಗಳು ಬಂದ್

ಚೆನ್ನೈ: ಕೋವಿಡ್ ಪ್ರಕರಣಗಳ ಹೆಚ್ಚಳದ ಕಾರಣ ರಾಜ್ಯದ 10–12 ತರಗತಿ ವಿದ್ಯಾರ್ಥಿಗಳ ಶಾಲೆಗಳ ಬಂದ್ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ಭಾನುವಾರ ಘೋಷಿಸಿದೆ.

10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಜನವರಿ 19 ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದೂ ಸರ್ಕಾರ ಹೇಳಿದೆ.

1 ರಿಂದ 9ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ದೃಷ್ಟಿಯಿಂದ ಭೌತಿಕ ತರಗತಿಗಳು ನಡೆಯುತ್ತಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.