ನವದೆಹಲಿ: ಆಮ್ಲಜನಕ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನವನೀತ್ ಕಲ್ರಾ ಅವರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಕಲ್ರಾ ಮಾಲಿಕತ್ವದ 'ಖಾನ್ ಚಾಚಾ, ಟೌನ್ ಹಾಲ್ ಮತ್ತು ನೇಜ್ ಆಂಡ್ ಜು' ರೆಸ್ಟೊರೆಂಟ್‌ಗಳಲ್ಲಿ ಕಾನೂನು ಬಾಹೀರವಾಗಿ ಸಂಗ್ರಹಿಸಲಾಗಿದ್ದ 524 ಆಮ್ಲಜನಕ ಸಿಲಿಂಡರ್‌ಗಳನ್ನು ಮೇ 7ರಂದು ವಶಪಡಿಸಿಕೊಳ್ಳಲಾಗಿತ್ತು.

ಮೇ 7ರಿಂದ ತಲೆಮರೆಸಿಕೊಂಡಿದ್ದ ಕಲ್ರಾ ಅವರು ಬಂಧನದಿಂದ ತಪ್ಪಿಸಿಕೊಳ್ಳಲು ದೆಹಲಿ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ಮಾಡಿದ್ದ ನ್ಯಾಯಾಲಯವು ಕಲ್ರಾ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದ ಕಲ್ರಾ ಅವರಿಗೆ ಅಲ್ಲಿಯೂ ಜಾಮೀನು ದೊರೆತಿರಲಿಲ್ಲ.

ಗುರುಗ್ರಾಮ್‌ನ ತೋಟದ ಮನೆಯಲ್ಲಿ ಅಡಗಿಕೊಂಡಿದ್ದ ಕಲ್ರಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.