ನವದೆಹಲಿ: ಕೋವಿಡ್ ನಿಯಮಾವಳಿಗಳನ್ನು ನಾಗರಿಕ ವಿಮಾನಯಾನ ಸಚಿವಾಲಯವು ಸಡಿಲಿಸಿದ್ದು, ವಿಮಾನಗಳ ಕ್ಯಾಬಿನ್ ಸಿಬ್ಬಂದಿ ಪಿಪಿಇ ಕಿಟ್ ಧರಿಸುವ ಅಗತ್ಯವಿಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿಗಾಗಿ ಅಂತರಾಷ್ಟ್ರೀಯ ವಿಮಾನಗಳಲ್ಲಿ ವಿಮಾನಯಾನ ಸಂಸ್ಥೆಗಳು ಮೂರು ಆಸನಗಳನ್ನು ಖಾಲಿ ಇಡಬೇಕಾಗಿಲ್ಲ ಎಂದು ತಿಳಿಸಿದೆ.

ವಿಮಾನಗಳ ಸಂಚಾರ ಕಾರ್ಯಾಚರಣೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಈ ಸಡಿಲಿಕೆಯನ್ನು ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾರ್ಚ್ 21 ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ. ವಿಮಾನ ನಿಲ್ದಾಣಗಳಲ್ಲಿನ ಭದ್ರತಾ ಸಿಬ್ಬಂದಿ ಪ್ರಯಾಣಿಕರ ತಪಾಸಣೆಯನ್ನು ಪುನರಾರಂಭಿಸಬಹುದು ಎಂದು ಹೇಳಿದೆ.

ಜನವರಿ ನಂತರ ಭಾರತದಲ್ಲಿ ವಿಮಾನಯಾನ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಫೆಬ್ರುವರಿಯಲ್ಲಿ ದೇಶದಲ್ಲಿ ಸುಮಾರು 76.96 ಲಕ್ಷ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಜನವರಿಗಿಂತ ಶೇ 20 ರಷ್ಟು ಹೆಚ್ಚು ಮಂದಿ ಪ್ರಯಾಣಿಸಿದ್ದಾರೆ.

ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ಉಸಿರಾಟದ ಸಮಸ್ಯೆ ಉಂಟಾದಾಗ ಬಳಸಲು ವಿಮಾನಯಾನ ಸಂಸ್ಥೆಗಳು ಕೆಲವು ಹೆಚ್ಚುವರಿ ಪಿಪಿಇ ಕಿಟ್‌ಗಳು, ಸ್ಯಾನಿಟೈಸರ್ ಮತ್ತು N-95 ಮುಖಗವಸುಗಳನ್ನು ಹೊಂದಿರಬೇಕು ಎಂದು ಸಚಿವಾಲಯ ತಿಳಿಸಿದೆ.

2021ರ ಅಕ್ಟೋಬರ್ 18 ರಿಂದಲೇ ದೇಶದಲ್ಲಿ ವಿಮಾನ ಸಂಚಾರ ಆರಂಭಗೊಂಡಿದೆ. 2022ರ ಮಾರ್ಚ್ 27 ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರ ಪುನರ್ ಆರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.