ನವದೆಹಲಿ: ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗಿರುವ ಮತ್ತೊಂದು ಕೋವಿಡ್–19 ಲಸಿಕೆಯ ಮಾನವರ ಮೇಲಿನ ಚಿಕಿತ್ಸಾ ಪ್ರಯೋಗಕ್ಕೆ (ಹ್ಯೂಮನ್ ಕ್ಲಿನಿಕಲ್ ಟ್ರಯಲ್) ಭಾರತದ ಔಷಧ ನಿಯಂತ್ರಣ ಮಹಾನಿರ್ದೇಶನದಿಂದ (ಡಿಸಿಜಿಐ) ಗುರುವಾರ ಅನುಮತಿ ದೊರೆತಿದೆ. ಅಹಮದಾಬಾದ್ ಮೂಲದ ಝೈಡಸ್ ಕ್ಯಾಡಿಲಾ ಹೆಲ್ತ್‌ಕೇರ್ ಲಿಮಿಟೆಡ್ ಕೋವಿಡ್–19 ಲಸಿಕೆ ಅಭಿವೃದ್ದಿ ಪಡಿಸಿದೆ.

ಕೋವಿಡ್–19 ವಿಷಯ ತಜ್ಞರ ಸಮಿತಿಯಿಂದ ಶಿಫಾರಸು ಆಧರಿಸಿ ತುರ್ತು ಅಗತ್ಯಗಳಿಗಾಗಿ ಚುರುಕು ಗತಿಯಲ್ಲಿ ಅನುಮತಿ ಪ್ರಕ್ರಿಯೆ ನಡೆಸಲಾಗಿದೆ. 'ಝೈಡಸ್ ಕ್ಯಾಡಿಲಾ ಹೆಲ್ತ್‌ಕೇರ್ ಅಭಿವೃದ್ಧಿ ಪಡಿಸಿರುವ ಕೊರೊನಾ ವೈರಸ್ ಚಿಕಿತ್ಸಕ ಲಸಿಕೆಯ ಒಂದು ಮತ್ತು 2ನೇ ಹಂತರದ ಕ್ಲಿನಿಕಲ್ ಟ್ರಯಲ್‌ಗಳಿಗೆ ಡಿಸಿಜಿಐನ ಡಾ.ವಿ.ಜಿ.ಸೊಮಾನಿ ಅವರು ಅನುಮತಿ ನೀಡಿದ್ದಾರೆ. ಕಂಪನಿ ಪ್ರಾಣಿಗಳ ಮೇಲೆ ನಡೆಸಿರುವ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಅನುಮತಿ ದೊರೆತಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇತ್ತೀಚೆಗಷ್ಟೇ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ 'ಕೋವಾಕ್ಸಿನ್' ಕ್ಲಿನಿಕಲ್ ಟ್ರಯಲ್‌ಗೆ ಅನುಮತಿ ನೀಡಲಾಗಿದೆ. ಕೋವಾಕ್ಸಿನ್ ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ಮೊದಲ ಕೋವಿಡ್–19 ಲಸಿಕೆಯಾಗಿದೆ.

ಇದನ್ನೂ ಓದಿ: ಕೋವಿಡ್‌ಗೆ ಭಾರತದ ಮೊದಲ ಲಸಿಕೆ ಕೋವಾಕ್ಸಿನ್: ಇಲ್ಲಿದೆ ಸಂಪೂರ್ಣ ಮಾಹಿತಿ

ಒಂದು ಮತ್ತು ಎರಡನೇ ಹಂತದ ಕ್ಲಿನಿಕಲ್ ಟ್ರಯಲ್ ಪೂರ್ಣಗೊಳಿಸಲು ಸುಮಾರು 3 ತಿಂಗಳು ಬೇಕಾಗಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ದೇಶದಲ್ಲಿ ದಾಖಲಾಗಿರುವ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 6 ಲಕ್ಷ ದಾಟಿದೆ. ಸೋಂಕಿನಿಂದ 18 ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಕೇವಲ ಐದು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 5 ಲಕ್ಷದಿಂದ 6 ಲಕ್ಷ ದಾಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.