ಭೋಪಾಲ್: ಹಸು ಮತ್ತು ಅದರ ಸಗಣಿ ಹಾಗೂ ಮೂತ್ರವು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ ಮತ್ತು ದೇಶವನ್ನು ಆರ್ಥಿಕವಾಗಿ ಸಮರ್ಥವಾಗಿಸುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಹೇಳಿದ್ದಾರೆ.

'ಸರ್ಕಾರವು ಗೋವುಗಳ ರಕ್ಷಣೆಗಾಗಿ ಗೋಶಾಲೆಗಳನ್ನು ಸ್ಥಾಪಿಸಿದೆ ಆದರೆ ಅವುಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಮಾಜದ ಪಾಲ್ಗೊಳ್ಳುವಿಕೆ ಅಗತ್ಯ' ಎಂದು ಭಾರತೀಯ ಪಶುವೈದ್ಯಕೀಯ ಸಂಘದಿಂದ ಆಯೋಜಿಸಲಾದ ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ತಿಳಿಸಿದರು.

'ನಾವು ಬಯಸಿದರೆ ನಮ್ಮ ಆರ್ಥಿಕತೆಯನ್ನು ಬಲಪಡಿಸಬಹುದು ಮತ್ತು ಗೋವುಗಳು, ಅವುಗಳ ಸಗಣಿ ಮತ್ತು ಮೂತ್ರದ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢಗೊಳಿಸಬಹುದು. ಮರದ ಬಳಕೆಯನ್ನು ಕಡಿಮೆ ಮಾಡಲು ಮಧ್ಯಪ್ರದೇಶದ ಚಿತಾಗಾರದಲ್ಲಿ ಗೋಕಾಷ್ಟ (ಗೋವಿನ ಸಗಣಿಯಿಂದ ಮಾಡಿದ ತುಂಡು) ವನ್ನು ಬಳಸಲಾಗುತ್ತಿದೆ' ಎಂದು ಹೇಳಿದರು.

'ಸಣ್ಣ ರೈತರು ಮತ್ತು ಜಾನುವಾರು ಮಾಲೀಕರಿಗೆ ಹಸು ಸಾಕಣೆ ಹೇಗೆ ಲಾಭದಾಯಕ ವ್ಯವಹಾರವಾಗಬಲ್ಲದು ಎಂಬುದರ ಕುರಿತು ಪಶುವೈದ್ಯರು ಮತ್ತು ತಜ್ಞರು ಫಲಿತಾಂಶ ಆಧಾರಿತ ಕೆಲಸದಲ್ಲಿ ತೊಡಗಬೇಕು' ಎಂದು ಅವರು ಹೇಳಿದರು.

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರುಷೋತ್ತಮ ರೂಪಾಲ ಮಾತನಾಡಿ, 'ಗುಜರಾತ್‌ನ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಹಸು ಸಾಕುವುದರಲ್ಲಿ ತೊಡಗಿಕೊಂಡಿದ್ದಾರೆ ಮತ್ತು ಇದೇ ಡೈರಿ ಉದ್ಯಮವು ಯಶಸ್ವಿಯಾಗಲು ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಆಯ್ಕೆ ಮಾಡುವ ಮಹಿಳಾ ಪಶುವೈದ್ಯಕೀಯ ಪದವೀಧರರಿಗೆ ಕೇಂದ್ರ ಸರ್ಕಾರವು ಸಹಾಯ ಮಾಡಬೇಕು' ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.