ಕೊಚ್ಚಿ: 2008ರಲ್ಲಿ ತಿರುವನಂತಪುರಂನಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರ್‌ಎಸ್ಎಸ್ ಕಾರ್ಯಕರ್ತರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ. ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ವಿಫಲಗೊಂಡಿದ್ದಾರೆ ಎಂದಿದೆ.

ಸತ್ರ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಆರ್‌ಎಸ್‌ಎಸ್ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಕೆ. ವಿನೋದ್ ಚಂದ್ರನ್ ಮತ್ತು ಸಿ. ಜಯಚಂದ್ರನ್ ಅವರ ದ್ವಿಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಆರೋಪಿಗಳ ಮೇಲೆ ಹೊರಿಸಲ್ಪಟ್ಟ ಆರೋಪಗಳಿಂದ ಅವರನ್ನು ಮುಕ್ತಗೊಳಿಸಲು ನಮಗೆ ಸಾಧ್ಯವಿಲ್ಲ. ಆದರೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲು ಫಿರ್ಯಾದಿ ಪಕ್ಷವು ವಿಫಲಗೊಂಡಿರುವ ಹಿನ್ನೆಲೆಯಲ್ಲಿ ಈ ತೀರ್ಪು ನೀಡಲಾಗಿದೆ. ಉಭಯ ಗುಂಪುಗಳ ನಡುವೆ ರಾಜಕೀಯ ದ್ವೇಷವಿರುವುದು ಗಮನಕ್ಕೆ ಬಂದಿದೆ ಎಂದು ಹೈಕೋರ್ಟ್‌ನ ದ್ವಿಸದಸ್ಯ ಪೀಠ ತಿಳಿಸಿದೆ.

ಹಲವಾರು ಕೊಲೆ ಪ್ರಕರಣಗಳಲ್ಲಿ ರಾಜಕೀಯ ದ್ವೇಷ ಮತ್ತು ವಿವೇಚನಾರಹಿತ ಕೃತ್ಯಗಳು ನಡೆಯುತ್ತಿರುವುದು ಬೇಸರದ ಸಂಗತಿ. ಇಂತಹ ಘಟನೆಗಳು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತವೆ ಎಂದು ನ್ಯಾಯಮೂರ್ತಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 16, 2016ರಲ್ಲಿ ತಿರುವನಂತಪುರಂನ ಹೆಚ್ಚುವರಿ ಸೆಷನ್ಸ್ ಕೋರ್ಟ್ 13 ಆರ್‌ಎಸ್ಎಸ್ ಕಾರ್ಯಕರ್ತರು ತಪ್ಪಿತಸ್ಥರು ಎಂದು ತೀರ್ಪು ನೀಡಿತ್ತು. ಎರಡು ಬಾರಿಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಏಪ್ರಿಲ್ 1, 2008ರಲ್ಲಿ ಸಿಪಿಐ(ಎಂ) ಕಾರ್ಯಕರ್ತ ವಿ.ವಿ. ವಿಷ್ಣು ಅವರನ್ನು ಹತ್ಯೆ ಮಾಡಲಾಗಿತ್ತು.

'ಮುಗ್ಧ'ರನ್ನು ಸಿಲುಕಿಸುವ ಯತ್ನ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.