ಲಾತೂರ್: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಅಪರಿಚಿತ ವಾಹನವೊಂದು ಗುದ್ದಿದ ಪರಿಣಾಮ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ 6.30 ಹೊತ್ತಿಗೆ ಲಾತೂರ್–ನಾಂದೇಡ್ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ವಿಶಾಖಪಟ್ಟಣ ನಿವಾಸಿ ಲಿಂಗುಬೆರು ರವಿ (41) ಎಂಬವರೇ ಮೃತಪಟ್ಟವರು.

ಹೆದ್ದಾರಿಯ ಭಟಂಗಲಿ ಹಾಗೂ ಮಮ್‌ದಾಪುರ ಗ್ರಾಮಗಳ ನಡುವೆ ಅಪರಿಚಿತ ವಾಹನವೊಂದು ಅವರ ಮೇಲೆ ಹರಿದಿದೆ. ಸ್ಥಳದಲ್ಲೇ ಅವರು ಕೊನೆಯುಸಿರೆಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ ಅವರು ಗುರುವಾರ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.