ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟಿಪೋರಾ ಪ್ರದೇಶದಲ್ಲಿ ಶನಿವಾರ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧ ಹುತಾತ್ಮರಾಗಿದ್ದಾರೆ.

ಮುಖ್ತಾರ್ ಅಹ್ಮದ್ ಹುತಾತ್ಮರಾದವರು. ‘ಚೋಟಿಪೋರಾ ನಿವಾಸಿಯಾದ ಯೋಧ ಮುಖ್ತಾರ್ ಅಹ್ಮದ್ ರಜೆಯ ಮೇಲೆ ಮನೆಗೆ ಬಂದಿದ್ದರು. ಶನಿವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಕೆಲವು ದಿನಗಳ ನಂತರ ಕಾಶ್ಮೀರದಲ್ಲಿ ನಾಗರಿಕರ ಮೇಲೆ ಉಗ್ರರ ದಾಳಿ ಹೆಚ್ಚಾಗಿದ್ದು, ಶೋಪಿಯಾನ್ನ ನೆರೆಯ ಜಿಲ್ಲೆ ಕುಲ್ಗಾಂನಲ್ಲಿ ಕಳೆದ ಮೂರು ದಿನಗಳಲ್ಲಿ ಇಬ್ಬರು ಸರಪಂಚರನ್ನು (ಗ್ರಾಮ ಪಂಚಾಯಿತಿ ಸದಸ್ಯರು) ಹತ್ಯೆ ಮಾಡಲಾಗಿದೆ. ಮಾರ್ಚ್ ತಿಂಗಳಲ್ಲಿ ಆರು ನಾಗರಿಕರು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.