ನವದೆಹಲಿ: 75ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯದ ‘ಭಾರತ: ಪ್ರಜಾಪ್ರಭುತ್ವದ ತಾಯಿ’ ಪರಿಕಲ್ಪನೆಯ ಸ್ತಬ್ಧಚಿತ್ರವು ಮೊದಲ ಬಹುಮಾನ ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ತಬ್ಧಚಿತ್ರವು ಸಂಪ್ರದಾಯ ಮತ್ತು ನಾವೀನ್ಯತೆಯನ್ನು ಬೆಸೆದಿದೆ. ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಅತ್ಯುತ್ತಮ ರೀತಿಯಲ್ಲಿ ಪ್ರದರ್ಶಿಸಿದ್ದು ಪ್ರೇಕ್ಷಕರನ್ನು ಆಕರ್ಷಿಸಿದೆ. ಭಾರತ ಪ್ರಜಾಪ್ರಭುತ್ವದ ತಾಯಿ ಎಂಬ ವಿಷಯವನ್ನು ಶ್ಲಾಘಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಈ ಸ್ತಬ್ಧಚಿತ್ರವು ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವುದರೊಂದಿಗೆ ಆಧುನಿಕ ಸ್ಪರ್ಶವನ್ನು ನೀಡಿದ್ದು, ಕಲಾತ್ಮಕ ಸೂಕ್ಷ್ಮತೆಯನ್ನು ಪ್ರಸ್ತುತಪಡಿಸುವುದರಲ್ಲಿ ಯಶಸ್ವಿಯಾಗಿದೆ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.