ಮುಂಬೈ: ನೈಸರ್ಗಿಕವಾಗಿ ಮತ್ತು ಲ್ಯಾಬ್‌ನಲ್ಲಿ ಉತ್ಪಾದಿಸಿದ 1559.6 ಕ್ಯಾರೆಟ್ ವಜ್ರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಭಾರತ ಮೂಲದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಸುಮಾರು ₹1.49 ಕೋಟಿ ಬೆಲೆಬಾಳುವ ವಜ್ರವನ್ನು ದುಬೈಗೆ ಕೊಂಡೊಯ್ಯುಲು ಯತ್ನಿಸಿದ್ದ ಎಂದು ಹೇಳಲಾಗಿದೆ.

ಆರೋಪಿಯನ್ನು ಬುಧವಾರ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯು ವಜ್ರವನ್ನು ಚಹಾ ಪ್ಯಾಕೆಟ್ ಒಳಗೆ ಬಚ್ಚಿಟ್ಟಿದ್ದ ಎನ್ನಲಾಗಿದ್ದು. ತನಿಖೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಶುಕ್ರವಾರ ಕೊಚ್ಚಿನ್ ಕಸ್ಟಮ್ ಆಧಿಕಾರಿಗಳು 1,709 ಗ್ರಾಂ ಚಿನ್ನವನ್ನು ಇಂಡಿಗೋ ಏರ್‌ಲೈನ್ಸ್‌ನ ಟಾಯ್ಲೆಟ್‌ನಲ್ಲಿ ವಶಪಡಿಸಿಕೊಂಡಿದ್ದಾರೆ.

₹ 85 ಲಕ್ಷ ಬೆಲೆಬಾಳುವ ಚಿನ್ನವನ್ನು ಅಪರಿಚಿತ ಬ್ಯಾಗ್‌ನಿಂದ ವಶಪಡಿಸಿಕೊಳ್ಳಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.