ನವದೆಹಲಿ: ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಶಿಫಾರಸಿನ ಪ್ರಕಾರ, ಅಂತರರಾಜ್ಯ ಸಂಪರ್ಕ ಬಿಂದು ಬಿಳಿಗುಂಡ್ಲುನಲ್ಲಿ ಕರ್ನಾಟಕವು ನಿಗದಿತ ಪ್ರಮಾಣದ ಕಾವೇರಿ ನೀರು ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಶಿಫಾರಸು ಮಾಡಿದೆ.

ಸೋಮವಾರ ನಡೆದ ಸಮಿತಿಯ 93ನೇ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿ ಜಲಸಂಪನ್ಮೂಲ ಇಲಾಖೆಗಳ ಅಧಿಕಾರಿಗಳು ಭಾಗಿಯಾದರು. ಕರ್ನಾಟಕವು ಫೆಬ್ರುವರಿ ಹಾಗೂ ಮಾರ್ಚ್ ತಿಂಗಳಲ್ಲಿ ತಲಾ 2.50 ಟಿಎಂಸಿ ನೀರನ್ನು ಸಸ್ಯವರ್ಗ, ಪ್ರಾಣಿಸಂಕುಲ ಮತ್ತು ಪರಿಸರ ಸಂರಕ್ಷಣೆಗಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಲಾಯಿತು.

ಜೂನ್ನಿಂದ ಈ ವರ್ಷದ ಫೆಬ್ರುವರಿ 9ರವರೆಗೆ ರಾಜ್ಯದ ನಾಲ್ಕು ಜಲಾಶಯಗಳಿಗೆ ಒಟ್ಟು ಒಳಹರಿವಿನ ಕೊರತೆ ಶೇ 54.43. ಜಲಾಶಯಗಳಿಂದ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ರಾಜ್ಯದ ಅಧಿಕಾರಿಗಳು ಸ್ಪಷ್ಟಪಡಿಸಿದರು. 7.61 ಬ್ಯಾಕ್ಲಾಗ್ ನೀರನ್ನು ಕರ್ನಾಟಕ ಬಿಡುಗಡೆ ಮಾಡಬೇಕು ಹಾಗೂ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಮಾರ್ಚ್ ಅಂತ್ಯದ ವರೆಗೆ ನೀರು ಬಿಡುಗಡೆ ಮಾಡಬೇಕು ಎಂದು ತಮಿಳುನಾಡಿನ ಅಧಿಕಾರಿಗಳು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.