ಕೋಲ್ಕತ್ತಾ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಡಾನಾ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳ ಮೇಲೆ ಪರಿಣಾಮ ಬೀರಲಿದೆ.

ಹೀಗಾಗಿ ಪೂರ್ವ ರೈಲ್ವೆ ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರ ರಾತ್ರಿ 8 ಗಂಟೆಯಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯವರೆಗೆ ಸ್ಥಳೀಯ ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ.
.DANA ಚಂಡಮಾರುತ ಅಪ್ಪಳಿಸಲು ಕ್ಷಣಗಣನೆ: ಯಾರು ಇಟ್ಟರೀ ಹೆಸರು? ಏನಿದರ ಅರ್ಥ?.
ಸೀಲ್ಡಾ ವಿಭಾಗದ ಆರು ಜಿಲ್ಲೆಗಳಲ್ಲಿ ರೈಲುಗಳು ಸಂಚರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾಕ್ಕೆ ಅಪ್ಪಳಿಸಿದ ಬಳಿಕ ಪಶ್ಚಿಮ ಬಂಗಾಳದ ಮೇಲೆ ಪರಿಣಾಮ ಬೀರಲಿದೆ. ಗಾಳಿಯ ವೇಗ ಗಂಟೆಗೆ 120 ಕಿ.ಮೀ ವೇಗದಲ್ಲಿ ಇರಲಿದ್ದು, ನಾಳೆ, ನಾಡಿದ್ದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸುಮಾರು 150 ಎಕ್ಸ್ಪ್ರೆಸ್ ಮತ್ತು ಪ್ರಯಾಣಿಕ ರೈಲುಗಳ ಸಂಚಾರ ಸ್ಥಗಿತವಾಗಲಿದೆ ಎಂದು ಆಗ್ನೇಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
.ಒಡಿಶಾದಲ್ಲಿ ಚಂಡಮಾರುತ ಸಾಧ್ಯತೆ: 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳ ಸ್ಥಾಪನೆ.ಕೋಟಿ ಜನರ ಕಾಡಿದ ‘ಯಸ್’: ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ಅಬ್ಬರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.