ಚೆನ್ನೈ: ‘ಗಾಜಾ’ ಚಂಡಮಾರುತದ ತೀವ್ರತೆಗೆ ತಮಿಳುನಾಡು ತತ್ತರಿಸಿದ್ದು, ರಾಜ್ಯದಾದ್ಯಂತ 13 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ.

ಗುರುವಾರ ರಾತ್ರಿ ನಾಗಪಟ್ಟಣಂ, ವೇದಾರಣ್ಯಂ ಜಿಲ್ಲೆಗಳಲ್ಲಿ ಚಂಡಮಾರುತ ಅಪ್ಪಳಿಸಿದೆ. ಹಲವೆಡೆ ಭೂಕುಸಿತ ಉಂಟಾಗಿದ್ದು, ಮರಗಳು ಧರೆಗುರುಳಿದ ಪರಿಣಾಮ ಮನೆಗಳಿಗೆ ಆಪಾರ ಪ್ರಮಾಣದ ಹಾನಿಯುಂಟಾಗಿದೆ.

ಇಂದು ಮುಂಜಾನೆ 4 ಗಂಟೆಗೆ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯಲ್ಲಿ 110ರಿಂದ 120 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮುನ್ನೆಚ್ಚರಿಕಾ ಕ್ರಮವಾಗಿ ನಾಗಪಟ್ಟಣಂ, ಪುದುಕೋಟೈ, ರಾಮನಾಥಪುರಂ, ತಿರುವರೂರ್ ಜಿಲ್ಲೆಗಳ ತಗ್ಗು ಪ್ರದೇಶದ 76 ಸಾವಿರಕ್ಕೂ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, 300ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ತೆರೆದಿದ್ದಾರೆ.

ನಾಗಪಟ್ಟಣ, ತಿರುವರೂರ್, ಕಡಲೂರು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ಪಡೆಯನ್ನು ನಿಯೋಜಿಸಲಾಗಿದೆ. ಭಾರತೀಯ ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆ ಸಹ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾವಾರು ಸಹಾಯವಾಣಿ ಸಂಖ್ಯೆಗಳು
ನಾಗಪಟ್ಟಣಂ – 9443500728, 9843810579, 9003322566
ಕಡಲೂರು - 04142-220700
ತಿರುವರೂರ್ -04366-226623
ಪುದುಕೋಟೈ - 04322-222207
ರಾಮನಾಥಪುರಂ - 04567-230060

ಇದನ್ನೂ ಓದಿ...ಗಾಜಾ: ತಮಿಳುನಾಡಿನಲ್ಲಿ ಕಟ್ಟೆಚ್ಚರ, ಮಂಗಳೂರು ಬಂದರಿನಲ್ಲಿ ಲಂಗರು ಹಾಕಿದ ದೋಣಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.