ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಮಂಗಳವಾರ ನಾಡ ಪಿಸ್ತೂಲ್ ಅನ್ನು ಸಿಬಿಐ ವಶಪಡಿಸಿಕೊಂಡಿದ್ದು, ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಗೆ ಬಳಸಿದ ಪಿಸ್ತೂಲಿಗೂ, ಇದಕ್ಕೂ ಸಾಮ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಈಚೆಗೆ ಬಂಧಿಸಿರುವ ಸಚಿನ್ ಪ್ರಕಾಶ್ ರಾವ್ ಅಂದುರೆ ನೀಡಿದ ಮಾಹಿತಿ ಮೇರೆಗೆ ಖುಕ್ರಿ ಹೆಸರಿನ, ಮೂರು ಸುತ್ತು ಗುಂಡು ಹಾರಿಸುವ 7.65 ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಅಂದುರೆಯ ಸಂಬಂಧಿಯ ಸ್ನೇಹಿತರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ. ಇದೇ ಪಿಸ್ತೂನಿಂದ ದಾಭೋಲ್ಕರ್ ಹತ್ಯೆ ಮಾಡಲಾಗಿದೆಯೇ ಎಂಬುದರ ಪತ್ತೆಗೆ ತನಿಖಾ ಸಂಸ್ಥೆಯ ಪರಿಶೀಲನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 18ರಂದು ಅಂದುರೆಯನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.