ನವದೆಹಲಿ: ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಚಿಸಲಾದ ಸಂಧಾನ ಸಮಿತಿಯ ವರದಿಯನ್ನು ಎರಡು ವಾರಗಳಲ್ಲಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸೂಚಿಸಿದೆ.

ತಮಿಳುನಾಡು ಮತ್ತು ಕರ್ನಾಟಕ ನಡುವಿನ ಮಾತುಕತೆ ವಿಫಲವಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯದ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಆಗ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ. ಎನ್. ಭಟ್ಟಿ ಅವರ ಪೀಠವು ಈ ನಿರ್ದೇಶನ ನೀಡಿತು.

ಈ ಹಿಂದೆ ಜಲಶಕ್ತಿ ಸಚಿವಾಲಯವು ನದಿ ಜಲಾನಯನ ಪ್ರದೇಶದಲ್ಲಿ ನೀರಿನ ಲಭ್ಯತೆ ನಿರ್ಣಯಿಸಲು ಮತ್ತು ರಾಜ್ಯಗಳ ನಡುವಿನ ಹಂಚಿಕೆ ಒಪ್ಪಂದಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿತ್ತು. ನೀರನ್ನು ಹಂಚಿಕೊಳ್ಳಲು ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳೊಂದಿಗೆ ಮಾತುಕತೆ ನಡೆಸಿತ್ತು.

ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪೆನ್ನಾರ್ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಜಲ ವಿವಾದ ಬಗೆಹರಿಸಲು ‘ದಕ್ಷಿಣ ಪಿನಾಕಿನಿ ಜಲವಿವಾದ ನ್ಯಾಯಮಂಡಳಿ’ ರಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಮಾತುಕತೆಯ ಮೂಲಕ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರವು ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದಿತ್ತು.

‘ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಸಂಧಾನ ಸಮಿತಿಯನ್ನು ರಚಿಸಲಾಗಿದೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಈ ಹಿಂದೆ ತಿಳಿಸಿತ್ತು. ಹೊಸದಾಗಿ ಸಂಧಾನ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಸೂಚಿಸಿತ್ತು. ನ್ಯಾಯಮಂಡಳಿ ರಚನೆಗೆ ತಮಿಳುನಾಡು ಸರ್ಕಾರ ಪಟ್ಟು ಹಿಡಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.