ಕಾನ್ಪುರ: ವಿದ್ಯಾರ್ಥಿಗಳ ಗುಂಪೊಂದು 'ಜೈ ಶ್ರೀರಾಮ್' ಎಂದು ಕೂಗುವಂತೆ ಒತ್ತಾಯಿಸಿ ದಲಿತ ಸಮುದಾಯದ 16 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಭಾರತೀಯ ನ್ಯಾಯ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

‘ದಲಿತ ಸಮುದಾಯದ ಬಾಲಕ ತನ್ನ ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿತ್ರವನ್ನು ಹಾಕಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿದೆ. ನಂತರ ಬಲವಂತವಾಗಿ ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಮಾಡಲಾಗಿದೆ’ ಎಂದು ಘಾಟಂಪುರ ಎಸಿಪಿ ರಂಜೀತ್ ಕುಮಾರ್ ತಿಳಿಸಿದ್ದಾರೆ.

‘ಹಲ್ಲೆ ನಡೆಸಿದವರು ಆತನ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.