ಜೈಪುರ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ನೀತಿಗಳಲ್ಲಿ ದಲಿತರು ನಂಬಿಕೆ ಮತ್ತು ವಿಶ್ವಾಸ ತೋರಿಸಿದ್ದಾರೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಆಡಳಿತದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತಿರುವುದು ಕಾಂಗ್ರೆಸ್ಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ’ ಎಂದು ಹೇಳಿದರು.

‘ಮೋದಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಜನರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿವೆ. ದಲಿತರು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ. ಕೇಂದ್ರ ಜಾರಿಗೆ ತರುವ ಯೋಜನೆಗಳು ದಲಿತರಿಗೆ ಅನುಕೂಲವಾಗುತ್ತಿದೆ’ ಎಂದರು.

ರಾಜಸ್ಥಾನ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಅವರು ರಾಜ್ಯದಲ್ಲಿ ಅಭಿವೃದ್ದಿ ಕುಂಠಿತಗೊಂಡಿದ್ದು, ಆಡಳಿತ ಕಣ್ಮರೆಯಾಗಿದೆ. ಜನರನ್ನು ಓಲೈಕೆ ಮಾಡುವುದರಲ್ಲಿಯೇ ಸರ್ಕಾರ ಮಗ್ನವಾಗಿದೆ ಎಂದು ಕಿಡಿಕಾರಿದ್ದಾರೆ.

‘ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಪ್ರತಿಯೊಂದು ವರ್ಗವೂ ಬೇಸತ್ತಿದೆ. ಈ ಕಾರಣಕ್ಕೆ ದಲಿತ ಸಮುದಾಯದ ಹೆಚ್ಚಿನ ಜನರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಲ್ಲಿ ಸರ್ಕಾರದ ನಿವೃತ್ತ ಅಧಿಕಾರಿಗಳು ಇದ್ದಾರೆ’ ಎಂದು ಹೇಳಿದರು.

ಮಾಜಿ ಐಎಎಸ್ ಅಧಿಕಾರಿ ಹನುಮಾನ್ ಸಿಂಗ್ ಭಾಟಿ, ನಿವೃತ್ತ ಐಪಿಎಸ್ ಅಧಿಕಾರಿ ಮಹೇಶ್ ಭಾರದ್ವಾಜ್ ಸೇರಿದಂತೆ 17 ಸ್ಥಳೀಯ ನಾಯಕರು ಮತ್ತು ನಿವೃತ್ತ ಅಧಿಕಾರಿಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.