ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಬೆದರಿಕೆ ಕರೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದವನು 7ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಎಂದು ವರದಿಯಾಗಿದೆ.

ಪೊಲೀಸರು ಆತನ ಮನೆಗೆ ಭೇಟಿ ನೀಡಿ ಪಾಲಕರಿಂದ ವಿವರಣೆ ಪಡೆದಿದ್ದಾರೆ. ‘ತಮ್ಮ ಮಗನಿಗೆ ಏನೂ ತಿಳಿದಿಲ್ಲ. ಮೊಬೈಲ್ ಫೋನ್ ಬಳಸುತ್ತಿದ್ದಾಗ, ಆಕಸ್ಮಿಕವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಹೋಗಿದೆ’ ಎಂದಿದ್ದಾರೆ.

‘ಪಾಲಕರ ಹೇಳಿಕೆ ತೃಪ್ತಿದಾಯಕವಾಗಿಲ್ಲ. ಹೀಗಾಗಿ ತನಿಖೆಯನ್ನು ಎಲ್ಲಾ ಆಯಾಮಗಳಿಂದಲೂ ನಡೆಸಲಾಗುತ್ತಿದೆ. ಈ ಕುರಿತಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.