ಮೀರತ್(ಉತ್ತರ ಪ್ರದೇಶ): ಮೂರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಮೀರತ್ನ ಝಾಕಿರ್ ನಗರದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಟ್ಟಡದ ಅಡಿ ಸಿಲುಕಿದ್ದ ಹಲವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಒಬ್ಬ ವ್ಯಕ್ತಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಸಾಜಿದ್ (40), ಅವರ ಮಗಳು ಸಾನಿಯಾ (15), ಮಗ ಸಾಕಿಬ್ (11), ಸಿಮ್ರಾ (ಒಂದೂವರೆ ವರ್ಷ), ರೀಜಾ (7), ನಫೊ (63), ಫರ್ಹಾನಾ (20), ಅಲಿಸಾ(18), ಅಲಿಯಾ(6) ಮತ್ತು ರಿಮ್ಸಾ(5 ತಿಂಗಳು) ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದ್ದಿದ್ದು, ಎನ್ಡಿಆರ್ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆ ಶೋಧ ನಡೆಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.