ಮುಂಬೈ: ಇಲ್ಲಿನ ಕೋಟೆ ಪ್ರದೇಶದಲ್ಲಿ ಆರು ಅಂತಸ್ತಿನ ಕಟ್ಟಡದಒಂದು ಭಾಗ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ಮತೃಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಗುರುವಾರ ಅವಶೇಷಗಳಡಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇವರು ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮಧ್ಯರಾತ್ರಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ. ಇನ್ನು ಶುಕ್ರವಾರ ಮುಂಜಾನೆ 62 ವರ್ಷದ ಮಹಿಳೆಯೊಬ್ಬರನ್ನು ಅವಶೇಷಗಳಡಿಯಿಂದ ಹೊರ ತೆಗೆದು, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದರು ಎಂದುಬೃಹತ್ ಮುಂಬೈ ನಗರ ಪಾಲಿಕೆಯ (ಬಿಎಂಸಿ) ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಘಟನೆಯಲ್ಲಿ ಇನ್ನೂ ಮೂವರಿಗೆ ಗಾಯಗಳಾಗಿದ್ದು, ಇದರಲ್ಲಿ 17 ವರ್ಷದ ಯುವಕನ ಸ್ಥಿತಿ ಬಹಳ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುರಿದಿದೆ ಎಂದು ಅವರು ಹೇಳಿದರು. ಭಾರೀ ಮಳೆಯಿಂದಾಗಿ ಗುರುವಾರ ಸಂಜೆ 4.45ರ ಸುಮಾರಿಗೆ ಆರು ಅಂತಸ್ತಿನ ‘ಭಾನುಶಾಲಿ’ ಕಟ್ಟಡದ ಒಂದು ಭಾಗ ಕುಸಿದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.