ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ವಿಷಯುಕ್ತ ಮದ್ಯ ಸೇವನೆ ದುರಂತದಲ್ಲಿ ಮೃತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

'185 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು ಪರಿಸ್ಥಿತಿ ಮೇಲೆ ನಿಗಾ ವಹಿಸುತ್ತಿದ್ದಾರೆ' ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಸಚಿವರು ಶುಕ್ರವಾರ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾದರು.

'ಪ್ರಕರಣ ಸಂಬಂಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೂಚನೆ ನೀಡಿದ್ದು, ಮೃತರ ಸಂಬಂಧಿಕರಿಗೆ ತಲಾ ₹10 ಲಕ್ಷ ಘೋಷಿಸಿದ್ದಾರೆ. ಅವಘಡ ಸಂಬಂಧ ತಮಿಳುನಾಡು ವಿಧಾನಸಭೆಯಲ್ಲೂ ವಿವರಣೆ ನೀಡಿದ್ದಾರೆ' ಎಂದು ಅವರು ತಿಳಿಸಿದ್ದಾರೆ.

ಜೂನ್ 19ರಂದು ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆ ದುರಂತ ಸಂಭವಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.