ನವದೆಹಲಿ: ನಟ ದೀಪ್ ಸಿಧು ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಟ್ರಕ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ದೀಪ್ ಸಿಧು ಅವರು ಕಳೆದ ವರ್ಷದ ಗಣರಾಜ್ಯೋತ್ಸವದಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿಯಾಗಿದ್ದರು.

ಹರಿಯಾಣದ ಸೋನಿಪತ್ನ ಪಿಪ್ಲಿ ಟೋಲ್ ಸಮೀಪ ದೀಪ್ ಸಿಧು ಅವರ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿತ್ತು. ಆ ಅಪಘಾತದಲ್ಲಿ ಸಿಧು ಸಾವಿಗೀಡಾಗಿದ್ದಾರೆ.

ಸಿಧು ಸಹೋದರ ಸುರ್ಜಿತ್ ಅವರ ದೂರಿನ ಆಧಾರದ ಮೇಲೆ ಟ್ರಕ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದ್ದು,ಸಿಧು ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಟನ ಕುಟುಂಬ ಸದಸ್ಯರು ಹೇಳಿದ್ದಾರೆ.

ಚಾಲಕನನ್ನು ಗುರುತಿಸಲಾಗಿದ್ದು, ಆತನಿಗಾಗಿ ಹುಟುಕಾಟ ನಡೆಸಲಾಗುತ್ತಿದೆ ಎಂದು ಸೋನಿಪತ್ ಎಸ್ಪಿ ರಾಹುಲ್ ಶರ್ಮಾ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.