ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಆತಿಶಿ ಹಾಗೂ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.30ಕ್ಕೆ ಮುಂದೂಡಿದೆ.

‘ಬಿಜೆಪಿಯು ಕೆಲ ಸಮುದಾಯಗಳಿಗೆ ಸೇರಿದ 30 ಲಕ್ಷ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಿದೆ’ ಎಂದು ಆರೋಪಿಸಿ ಆತಿಶಿ, ಕೇಜ್ರಿವಾಲ್ ಹಾಗೂ ಎಎಪಿ ನಾಯಕರಾದ ಸುನೀಲ್ ಕುಮಾರ್ ಗುಪ್ತಾ ಹಾಗೂ ಮನೋಜ್ ಕುಮಾರ್ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣವು ಬಾಕಿ ಇರುವಾಗಲೇ ತಮ್ಮ ವಿರುದ್ಧದ ಮೊಕದ್ದಮೆಯನ್ನು ಪ್ರಶ್ನಿಸಿ ಆತಿಶಿ, ಕೇಜ್ರಿವಾಲ್ ಸೇರಿ ನಾಲ್ವರೂ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೆ.2ರಂದು ತೀರ್ಪು ನೀಡಿದ್ದ ಹೈಕೋರ್ಟ್ ‘ಬಿಜೆಪಿಯನ್ನು ನಿಂದಿಸುವ ಹಾಗೂ ಅನಗತ್ಯ ರಾಜಕೀಯ ಲಾಭ ಗಳಿಸುವ ಉದ್ದೇಶದ ಆರೋಪಗಳು ಮಾನಹಾನಿಕರವಾಗಿವೆ’ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.