ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ | ಬಂದೂಕು ತೋರಿಸಿ ₹3.5 ಕೋಟಿ ದರೋಡೆ: 12 ಮಂದಿ ಬಂಧನ

Published : 19 ಜುಲೈ 2024, 2:26 IST
Last Updated : 19 ಜುಲೈ 2024, 2:26 IST
ಫಾಲೋ ಮಾಡಿ
Comments

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ‌‌ಸಾರಿಗೆ ಕಚೇರಿಯೊಂದರಿಂದ ₹3.5 ಕೋಟಿ ದರೋಡೆ ಮಾಡಿದ ಆರೋಪದಡಿ ಹನ್ನರೆಡು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವಾರ ದೆಹಲಿಯ ಕಿಶನ್‌ಗಂಜ್‌ ಪ್ರದೇಶದಲ್ಲಿ ಘಟನೆ ನಡೆದಿದೆ. ಸಾರಿಗೆ ಕಚೇರಿ ಪ್ರವೇಶಿಸಿದ ದುಷ್ಕರ್ಮಿಗಳು ಅಲ್ಲಿದ್ದ ವ್ಯಕ್ತಿಗೆ ಬಂದೂಕು ತೋರಿಸಿ ಹಣ ದರೋಡೆ ಮಾಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತರಾದ ಮನೋಜ್‌ ಕುಮಾರ್ ಮೀನಾ ಹೇಳಿದ್ದಾರೆ.

ಪ್ರಕರಣ ಸಂಬಂಧ ಎಂಟು ಮಂದಿಯನ್ನು ಗುರುವಾರ ಬಂಧಿಸಲಾಗಿದೆ. ನಾಲ್ಕು ಮಂದಿಯನ್ನು ಮೊದಲೇ ಬಂಧಿಸಲಾಗಿತ್ತು. ಆರೋಪಿಗಳ ಗುರುತನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT