ನವದೆಹಲಿ: ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳವು ಶುಕ್ರವಾರ, ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ದಾಳಿ ವೇಳೆ, ₹ 12 ಲಕ್ಷ ಹಣ, ಪರವಾನಗಿ ಪಡೆಯದೆ ಇಟ್ಟುಕೊಂಡಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ವಕ್ಫ್ ಮಂಡಳಿಗೆ ಸಂಬಂಧಿಸಿದ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಂತೆ ಎಸಿಬಿ ತನಿಖೆ ನಡೆಸುತ್ತಿದೆ.

2020ರ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಓಖ್ಲಾ ಕ್ಷೇತ್ರದ ಶಾಸಕ ಖಾನ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು.

ವಕ್ಫ್ ಮಂಡಳಿಯ ಹೊಸ ಕಚೇರಿಯನ್ನು ನಿರ್ಮಿಸಿದ ಕಾರಣ ತಮಗೆ ಸಮನ್ಸ್ ನೀಡಲಾಗಿದೆ ಎಂದು ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷ ಖಾನ್ ಅವರು ನೋಟಿಸ್ ಕುರಿತು ಟ್ವೀಟ್ ಮಾಡಿದ್ದರು.

ಖಾನ್ ಅವರ ಮನೆ ಮತ್ತು ಅವರ ಇತರ ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಂದು ಸ್ಥಳದಿಂದ ₹ 12 ಲಕ್ಷ ನಗದು, ಪರವಾನಗಿ ಇಲ್ಲದ ಶಸ್ತ್ರಾಸ್ತ್ರ ಮತ್ತು ಕೆಲವು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಲೆಫ್ಟಿನೆಂಟ್ ಗವರ್ನರ್ ಸಚಿವಾಲಯಕ್ಕೆ ಪತ್ರ ಬರೆದಿದ್ದ ಎಸಿಬಿ, ಖಾನ್ ಸಾಕ್ಷಿಗಳನ್ನು ಬೆದರಿಸುವ ಮೂಲಕ ತನಿಖೆಗೆ ಅಡ್ಡಿಪಡಿಸುತ್ತಿದ್ದು, ಅವರನ್ನು ದೆಹಲಿಯ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.