ಭುವನೇಶ್ವರ: ಒಡಿಶಾದ ರಾಜಧಾನಿ ಭುವನೇಶ್ವರದಿಂದ ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭುವನೇಶ್ವರದ ಬಿಜು ಪಟ್ನಾಯಕ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಬಿಪಿಐಎ) ದೆಹಲಿಗೆ ಹೊರಟಿದ್ದ ವಿಮಾನವು ಟೇಕ್ ಆಫ್ ಆದ 40 ನಿಮಿಷಗಳ ನಂತರ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

‘ಗಾಳಿಯ ಮಧ್ಯದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನವು ಬೆಳಿಗ್ಗೆ 8.20ರ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ’ ಎಂದು ಬಿಪಿಐಎ ನಿರ್ದೇಶಕ ಪ್ರಸನ್ನ ಪ್ರಧಾನ್ ತಿಳಿಸಿದ್ದಾರೆ.

‘ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಕ್ಕಿಯ ಹೊಡೆತದಿಂದ ತಾಂತ್ರಿಕ ಸಮಸ್ಯೆ ಉಂಟಾಗಿದೆ ಎಂದು ಶಂಕಿಸಲಾಗಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದಿಂದ ಅನುಮತಿ ಪಡೆದ ನಂತರ ವಿಮಾನವು ಮತ್ತೆ ತನ್ನ ಹಾರಾಟವನ್ನು ಪ್ರಾರಂಭಿಸಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ, ಪೈಲಟ್ ತಾಂತ್ರಿಕ ಸಮಸ್ಯೆಯ ಬಗ್ಗೆ ನಮಗೆ ತಿಳಿಸಿದರು. ನಂತರ ವಿಮಾನವು ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿತು ಎಂದು ವಿಮಾನದಲ್ಲಿದ್ದ ಪ್ರಯಾಣಿಕ ತ್ರಿನಾಥ್ ಲೆಂಕಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.