ನವದೆಹಲಿ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾದ ನಂತರವೂ‘ನಮೋ ಟಿ.ವಿ.’ಯಲ್ಲಿ ಚುನಾವಣಾ ಪ್ರಚಾರದ ಕಾರ್ಯಕ್ರಮ ಪ್ರಸಾರ ಮಾಡಿದ್ದಕ್ಕಾಗಿ ಬಿಜೆಪಿಗೆ ದೆಹಲಿಯ ಮುಖ್ಯ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

‘ಶುಕ್ರವಾರ ಬೆಳಿಗ್ಗೆ 6ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿತ್ತು. ನಮೋ ಟಿ.ವಿ.ಯಲ್ಲಿ ಆ ನಂತರವೂ ಚುನಾವಣಾ ಪ್ರಚಾರ ಮಾಡಿದ ಕಾರಣಕ್ಕೆ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಏಪ್ರಿಲ್ ತಿಂಗಳಲ್ಲಿಯೂ ಪೂರ್ವ ಪ್ರಮಾಣೀಕೃತವಲ್ಲದ ಕಾರ್ಯಕ್ರಮಗಳನ್ನು ನಮೋ ಟಿ.ವಿ.ಯಲ್ಲಿ ಪ್ರಸಾರ ಮಾಡಿದ ಬಳಿಕ ಬಿಜೆಪಿಗೆ ಆಯೋಗ ಎಚ್ಚರಿಕೆ ನೀಡಿ, ಎಲ್ಲ ಕಾರ್ಯಕ್ರಮ ಪ್ರಸಾರಕ್ಕೂ ಮುನ್ನ ಚುನಾವಣಾ ಆಯೋಗದ ಮಾಧ್ಯಮ ಸಮಿತಿಯ ಪೂರ್ವಾನುಮತಿ ಪಡೆಯಬೇಕು ಎಂದು ಸೂಚನೆ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.