ನವದೆಹಲಿ: ಮಂಗಳವಾರ (ಫೆ.13) ನಡೆಯಲಿರುವ ದೆಹಲಿ ಚಲೋ ಮೆರವಣಿಗೆ ವೇಳೆ ಉದ್ವಿಗ್ನತೆ ಮತ್ತು ಅಶಾಂತಿ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಈ ಆದೇಶ ಒಂದು ತಿಂಗಳ ಕಾಲ ಜಾರಿಯಲ್ಲಿರುತ್ತದೆ.

ಈ ಕುರಿತು ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಸೋಮವಾರ ಆದೇಶ ಹೊರಡಿಸಿದ್ದಾರೆ. ಯಾವುದೇ ರೀತಿಯ ರ್ಯಾಲಿ, ಮೆರವಣಿಗೆ, ರಸ್ತೆ ಮಾರ್ಗಗಳನ್ನು ನಿರ್ಬಂಧಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಫೆಬ್ರುವರಿ 12ರಿಂದ ಜಾರಿಗೆ ಬರಲಿದ್ದು, ಮಾರ್ಚ್ 12ರವರೆಗೆ ಜಾರಿಯಲ್ಲಿರುತ್ತದೆ.
.ನಾಳೆ 'ದೆಹಲಿ ಚಲೋ': ಪ್ರತಿಭಟನೆಗೆ ಬರುವ ರೈತರ ವಾಹನ ತಡೆಯಲು ಕಾಂಕ್ರಿಟ್ ತಡೆಗೋಡೆ.
ಟ್ರ್ಯಾಕ್ಟರ್ ರ್ಯಾಲಿಗೆ ನಿಷೇಧ ಹೇರಲಾಗಿದೆ. ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ಮೆರವಣಿಗೆ ಮೂಲಕ ದೆಹಲಿ ಪ್ರವೇಶಿಸುವ ನಿರೀಕ್ಷೆಯಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (SKM), ಕಿಸಾನ್ ಮಜ್ದೂರ್ ಮೋರ್ಚಾ (KMM) ಮತ್ತು ಇತರ ಹಲವಾರು ರೈತ ಸಂಘಗಳು ಫೆಬ್ರುವರಿ 13 ರಂದು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲು 'ದೆಹಲಿ ಚಲೋ ಮೆರವಣಿಗೆ'ಗೆ ಕರೆ ನೀಡಿವೆ.

ಪ್ರತಿಭಟನೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ರೈಲಿನಲ್ಲಿ ತೆರಳುತ್ತಿದ್ದ ಕರ್ನಾಟಕದ ಸುಮಾರು 100 ರೈತರನ್ನು ಭೋಪಾಲ್ನಲ್ಲಿ ರಾಜ್ಯ ಪೊಲೀಸರು ತಡೆದಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ (SKM) ತಿಳಿಸಿದೆ.
.ದೆಹಲಿ ಚಲೋ: ಭೋಪಾಲ್ ರೈಲು ನಿಲ್ದಾಣದಲ್ಲಿ ಕರ್ನಾಟಕದ 70 ರೈತರು ಪೊಲೀಸ್ ವಶಕ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.