ನವದೆಹಲಿ: ಪ್ರತಿಭಟನಾನಿರತ ರೈತರು 'ದೆಹಲಿ ಚಲೋ' ಮೆರವಣಿಗೆ ಮುಂದುವರಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆಯನ್ನು ಮುಂದುವರಿಸಲಾಗಿದೆ. ಗಡಿ ಪ್ರದೇಶಗಳ ರಸ್ತೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

ಹರಿಯಾಣದ ಸಿಂಘು, ಟಿಕ್ರಿ ಗಡಿ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಲಭೆಗಳನ್ನು ನಡೆಯದಂತೆ ತಡೆಯಲು ಭದ್ರತಾ ಸಿಬ್ಬಂದಿ ನಿಯೋಜನೆ ಹೆಚ್ಚಿಸಲಾಗಿದ್ದು, ಪರಿಸ್ಥಿತಿ ಅವಲೋಕನಕ್ಕೆ ಡ್ರೋನ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಹರಿಯಾಣ ಗಡಿ ಮತ್ತು ಉತ್ತರಪ್ರದೇಶ ಘಾಜಿಪುರ ಗಡಿ ರಸ್ತೆಗಳಲ್ಲಿ ಬಹುಪದರ ಕಾಂಕ್ರಿಟ್ ತಡೆಗೋಡೆ, ಕಬ್ಬಿಣದ ಮೊಳೆಗಳು, ಕಂಟೇನರ್ ಗೋಡೆಗಳನ್ನು ನಿರ್ಮಿಸಲಾಗಿದೆ.

ಗಡಿ ಪ್ರದೇಶದಲ್ಲಿ ಮತ್ತು ಕೇಂದ್ರ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸುವುದು ಅನಿವಾರ್ಯವಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆ ಕ್ರಮಗಳಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಪ್ರಯಾಣಿಕರು ಪರದಾಡುವಂತಾಗಿದೆ.

ಕೃಷಿ ಉತ್ಪನ್ನಗಳಿಗೆ 'ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನಿನ ಖಾತರಿ' ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾವಿರಾರು ರೈತರು 'ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆಯನ್ನು ಮಂಗಳವಾರ ಆರಂಭಿಸಿದ್ದಾರೆ.
.Farmers Protest: ದೆಹಲಿಯತ್ತ ನುಗ್ಗಿದ ರೈತಪಡೆ; ಪ್ರತಿಭಟನಕಾರರ ಮೇಲೆ ಅಶ್ರುವಾಯು.Farmers protest | ಸಮಸ್ಯೆಗಳಿಗೆ ಗಲಭೆ ಪರಿಹಾರವಲ್ಲ, ಮಾತುಕತೆಗೆ ಬನ್ನಿ: ಠಾಕೂರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.