ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು (ಸೋಮವಾರ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಎಎಪಿ ಕಾನೂನು ತಜ್ಞರ ತಂಡ ತಿಳಿಸಿರುವುದಾಗಿ ‘ಲೈವ್‌ಲಾ’ ವರದಿ ಮಾಡಿದೆ.

ಈಚೆಗೆ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಸಿಬಿಐ ನಿರ್ಧಾರವನ್ನು ಎತ್ತಿಹಿಡಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ‘ಬಂಧನಕ್ಕೆ ತಡೆ ನೀಡಲು ಕೇಜ್ರಿವಾಲ್ ಸಮರ್ಪಕ ಕಾರಣ ನೀಡಿಲ್ಲ’ ಎಂದು ತಿಳಿಸಿದ್ದರು.

ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ಕೂಡ ವಿಲೇವಾರಿ ಮಾಡಿದ್ದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ಮೊರೆಹೋಗಲು ಅವಕಾಶ ನೀಡಿತ್ತು.

ಸಿಬಿಐ ಬಂಧನ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 17ಕ್ಕೆ ಪೂರ್ಣಗೊಳಿಸಿದ್ದ ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿತ್ತು. ಜುಲೈ 29ರಂದು ಜಾಮೀನು ಅರ್ಜಿ ಕುರಿತಾದ ತೀರ್ಪನ್ನು ಕಾಯ್ದಿರಿಸಿತ್ತು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ತಿಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು.
.ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಸೇರಿ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ CBI.Excise Policy Case: CBIನಿಂದ ಕೇಜ್ರಿವಾಲ್ ಬಂಧನ ಎತ್ತಿಹಿಡಿದ ದೆಹಲಿ ಹೈಕೋರ್ಟ್.ದೆಹಲಿ ಅಬಕಾರಿ ನೀತಿ ಹಗರಣ: ಮನೀಷ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು.ಅಬಕಾರಿ ನೀತಿ ಹಗರಣ | CBI ಚಾರ್ಜ್ಶೀಟ್: ಪೂರಕ ದಾಖಲೆ ಸಲ್ಲಿಸಿಲ್ಲ ಎಂದ ಕೋರ್ಟ್.ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಸೇರಿ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ CBI.ಅಬಕಾರಿ ನೀತಿ ಹಗರಣ | ಅರವಿಂದ ಕೇಜ್ರಿವಾಲ್ಗೆ ಸಿಹಿ–ಕಹಿ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.